ಶುಕ್ರವಾರ, ಜೂನ್ 25, 2021
29 °C

ಶಾಸ್ತ್ರೀಯ ಕನ್ನಡ ಯೋಜನಾ ನಿರ್ದೇಶಕರಾಗಿ ‘ಗಡಿನಾಡು ಕಾಸರಗೋಡಿನ ಶಿವರಾಮ ಶೆಟ್ಟಿ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿರುವ ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕರಾಗಿ ಡಾ.ಬಿ. ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. 

ಕಾಸರಗೋಡಿನಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಶಿವರಾಮಶೆಟ್ಟಿ ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಕೇಂದ್ರವು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಭಾಷಾ ಸಂಸ್ಥಾನದಿಂದ ನಡೆಯುತ್ತಿದೆ. ಕನ್ನಡ ಪರಂಪರೆಯ ಸಂಶೋಧನಾ ಕಾರ್ಯಗಳನ್ನು ವಿಸ್ತರಿಸುವ ಕಾರ್ಯ ಈ ಕೇಂದ್ರದಲ್ಲಿ ನಡೆಯುತ್ತದೆ. 

63 ವರ್ಷದ ಶಿವರಾಮ ಶೆಟ್ಟಿ, ಆಧುನಿಕ ಮತ್ತು ಮಧ್ಯಕಾಲೀನ ಕನ್ನಡ ಸಾಹಿತ್ಯ, ಸಾಹಿತ್ಯ ಸಿದ್ಧಾಂತ, ಜಾನಪದ, ತುಳು ಜಾನಪದ, ಸಾಂಸ್ಕೃತಿಕ ಅಧ್ಯಯನ ಹೀಗೆ ಹಲವು ವಿಷಯಗಳಲ್ಲಿ ತಜ್ಞರೆನಿಸಿಕೊಂಡಿದ್ದಾರೆ. 50ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ. 70ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ‘ತುಳುನಾಡಿನ ಸಸ್ಯ ಜಾನಪದ’ ಅವರ ಪಿಎಚ್‌ಡಿ ಪ್ರಬಂಧ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು