ಭಾನುವಾರ, ಏಪ್ರಿಲ್ 18, 2021
33 °C

ಕೆಪಿಎಸ್‌ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಾಲಿ ಸದಸ್ಯರಾಗಿರುವ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ 2019ರ ಸೆಪ್ಟೆಂಬರ್‌ 3ರಂದು ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದರು.

ಕೃಷಿ ಎಂಜಿನಿಯರಿಂಗ್‌ ಪದವೀಧರರಾಗಿರುವ ಇವರ ಅಧಿಕಾರದ ಅವಧಿ ಇನ್ನೂ ಮೂರೂವರೆ ವರ್ಷ  ಇದೆ.

ನಿವೃತ್ತ ಐಎಎಸ್‌ ಅಧಿಕಾರಿ ಷಡಾಕ್ಷರಿ ಸ್ವಾಮಿ ಅವರು ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶನಿವಾರ ನಿವೃತ್ತರಾದರು.

ಅವರ ಸ್ಥಾನಕ್ಕೆ ಶಿವಶಂಕರಪ್ಪ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸು ಆಧರಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಸದಸ್ಯರೊಬ್ಬರನ್ನೇ ಅಧ್ಯಕ್ಷರಾಗಿ ನೇಮಕ ಮಾಡಿರುವುದರಿಂದಾಗಿ ಕೆಪಿಎಸ್‌ಸಿಯಲ್ಲಿ ಒಂದು ಸದಸ್ಯ ಸ್ಥಾನ ಖಾಲಿ ಆದಂತಾಗಿದೆ.

ಇದನ್ನೂ ಓದಿ... ಶೇ.50ರಷ್ಟು ಚಿತ್ರಮಂದಿರ ಭರ್ತಿ ಆದೇಶ: ಏ.7ರ ವರೆಗೆ ಹಿಂದಕ್ಕೆ ಪಡೆದ ಸರ್ಕಾರ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು