ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ವತಿಯಿಂದ ನೀಡಲಾಗುವ 2023ನೇ ಸಾಲಿನ ‘ಶ್ರೀಕೃಷ್ಣದೇವರಾಯ
ಪುರಸ್ಕಾರ’ಕ್ಕೆ ನಟ ಶ್ರೀನಾಥ್, ತೆಲುಗು ನಟ ರಾಜಶೇಖರ್ ಮತ್ತು ಅವರ ಪತ್ನಿ ಜೀವಿತಾ ರಾಜಶೇಖರ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹25 ಸಾವಿರ ನಗದು, ಸ್ಮರಣಿಕೆ ಒಳಗೊಂಡಿವೆ. ವೈಯ್ಯಾಲಿಕಾವಲ್‌ನಲ್ಲಿರುವ ತೆಲುಗು ವಿಜ್ಞಾನ ಸಮಿತಿ ಆವರಣದ ಶ್ರೀಕೃಷ್ಣ ದೇವರಾಯ ಕಲಾಮಂದಿರ ದಲ್ಲಿ ಮಾರ್ಚ್ 25 ರಂದು ಸಂಜೆ 4.30ಕ್ಕೆ ‘ಯುಗಾದಿ ಉತ್ಸವ’ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಂಸದ ಡಿ.ವಿ. ಸದಾನಂದಗೌಡ, ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಮಿತಿಯ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಮುನಿಸ್ವಾಮಿ ರಾಜು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಎ. ರಾಧಾಕೃಷ್ಣರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.