ಮಂಗಳವಾರ, ಜನವರಿ 19, 2021
24 °C

ಬಿಜೆಪಿ ಮುಖಂಡರಿಗೆ ಊಟ ಬಡಿಸಿದ ಎಸ್‌ಐ: ವಿಡಿಯೊ ವೈರಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಹಾಗೂ ಬಿಜೆಪಿ ಮುಖಂಡರಿಗೆ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್ ನವೀನ್‌ಗೌಡ ಸಮವಸ್ತ್ರದಲ್ಲೇ ಊಟ ಬಡಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಚಿವ ಸಿ.ಸಿ.ಪಾಟೀಲ ಭಾನುವಾರ ಜಿಲ್ಲೆಯ ವಿವಿಧೆಡೆ ಕಲ್ಲುಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಆರ್‌ಎಸ್‌ ಆವರಣದಲ್ಲಿರುವ ಮಯೂರ ಹೋಟೆಲ್‌ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿವರ ಜೊತೆ ಬಿಜೆಪಿ ಮುಖಂಡರೂ ಊಟಕ್ಕೆ ಕುಳಿತಿದ್ದರು. ಈ ಸಂದರ್ಭದಲ್ಲಿ ನವೀನ್‌ಗೌಡ್‌ ಊಟ ಬಡಿಸಿದ್ದಾರೆ.

ಊಟ ಬಡಿಸುತ್ತಿರುವ ದೃಶ್ಯಗಳು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಶಿಸ್ತು ಪಾಲಿಸಬೇಕಾದ ಪೊಲೀಸ್‌ ಅಧಿಕಾರಿ ರಾಜಕಾರಣಿ, ರಾಜಕೀಯ ಪಕ್ಷದ ಮುಖಂಡರಿಗೆ ಊಟ ಬಡಿಸುವ ಮೂಲಕ ವೃತ್ತಿಗೆ ಅಗೌರವ ತಂದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ನವೀನ್‌ಗೌಡ ಪ್ರತಿಕ್ರಿಯೆ ದೊರೆಯಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು