ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ ಸ್ವಾಮೀಜಿ ಜಯಂತಿ: ಟ್ವೀಟ್‌ ಮೂಲಕ ಗೌರವ ನಮನ ಸಲ್ಲಿಸಿದ ಮೋದಿ

Last Updated 1 ಏಪ್ರಿಲ್ 2022, 4:28 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆಗೆ ಕ್ಷಣ ಗಣನೆ ಆರಂಭವಾಗಿದೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ಆರಂಭವಾಗಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ, ಇತರ ಮುಖಂಡರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT