ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ. 3ಕ್ಕೆ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ

Last Updated 5 ಜುಲೈ 2022, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು‌ ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿ’ಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳುಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋ ತ್ಸವ ಮಾಡಲಾಗುತ್ತಿದೆ’ ಎಂದರು.

‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ’ ಎಂದರು.

ಸಮಿತಿ ಅಧ್ಯಕ್ಷ ಕೆ.ಎನ್. ರಾಜಣ್ಣ ಮಾತನಾಡಿ, ‘ಸಿದ್ದರಾಮಯ್ಯ ಈ ಆಚರಣೆ ಅವಶ್ಯಕತೆ ಇಲ್ಲ ಅಂದಿದ್ದರು. ಆದರೆ, ನಾವೆಲ್ಲ ಅವರ ಮನವೊಲಿಸಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಈ ಕಾರ್ಯಕ್ರಮದ ಬಗ್ಗೆ ಯಾರೂ ಅನ್ಯತಾ ಭಾವಿಸಬಾರದು’ ಎಂದರು‌.

ಮಾಜಿ ಸಚಿವ ಬಸವರಾಜ ರಾಯರಡ್ಡಿ, ‘ರಾಜ್ಯದಾದ್ಯಂತ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳಿದ್ದಾರೆ. ಹೀಗಾಗಿ ಎಲ್ಲರೂ ಬರಲು ಅನುಕೂಲ ಆಗಲಿ ಎಂದು ದಾವಣಗೆರೆಯಲ್ಲಿ ಕಾರ್ಯಕ್ರಮ ಆಯೋಜಿದ್ದೇವೆ’ ಎಂದರು.

ಕಾಂಗ್ರೆಸ್‌ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT