ಅನ್ಯಾಯ, ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ದದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ.
ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಹಾಗೂ ಸಾಮಾಜಿಕ ಚಿಂತಕ ಶ್ರೀ ಡಿ.ಎಸ್. ನಾಗಭೂಷಣ ಅವರು ಕಾಲವಾದ ವಿಷಯ ತಿಳಿದು ಬೇಸರವಾಯಿತು. ಗಾಂಧಿ ಚಿಂತನೆಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಿದ ಅವರ ಅಗಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪಗಳು. pic.twitter.com/IVRdHrvwQM
ಖ್ಯಾತ ವಿಮರ್ಶಕ, 'ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿ ಎಸ್ ನಾಗಭೂಷಣ ಅವರ ನಿಧನ ಸುದ್ಧಿ ದುಃಖ ತರಿಸಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/4kGZ5YxrJ0