ಕಲಬುರಗಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಹೇಳುವುದು ಗೊತ್ತೇ ಇಲ್ಲ, ಬರೀ ಸುಳ್ಳು ಹೇಳುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ:ಎಚ್.ಡಿ.ದೇವೇಗೌಡರದ್ದು ಪುಟಗೋಸಿ ರಾಜಕಾರಣವಾ: ಕುಮಾರಸ್ವಾಮಿಗೆ ಸಿದ್ದರಾಮಯ್ಯ

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರ ಪತನವಾಗಲು ನಾನು ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಂದು ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಸಂದರ್ಭ ಮಾಡಿದ ಭಾಷಣದಲ್ಲಿ ಸರ್ಕಾರ ಪತನಕ್ಕೆ ಬಿ.ಎಸ್.ಯಡಿಯೂರಪ್ಪನವರು ಕಾರಣ ಎಂದಿದ್ದರು. ಅವರಿಗೆ ಎರಡು ನಾಲಿಗೆ ಇದೆಯಾ? ಮೈಸೂರಿನ ಜನರನ್ನು ನನ್ನ ವಿರುದ್ಧ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆ’ ಎಂದು ಹೇಳಿದರು.

ಕುಮಾರಸ್ವಾಮಿ ನನ್ನ ಜತೆ ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದಾರೆ. ಶಾಸಕರು ಬಿಜೆಪಿ ಜತೆ ತೆರಳುವ ಸುಳಿವು ಸಿಕ್ಕಿದಾಗ ಅವರು ಅಮೆರಿಕದಲ್ಲಿದ್ದರು. ಬನ್ನಿ ಎಂದು ಕರೆದರೂ ಬರಲಿಲ್ಲ. ಈಗ ನನ್ನ ಮೇಲೆ ಆರೋಪ ಮಾಡುತ್ತಾರೆ. ಅವರ ಆರೋಪಗಳಿಗೆ ಉತ್ತರಿಸಿ ಸಾಕಾಗಿದೆ. ಇನ್ನು ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಓದಿ:ನಾನು ಯಡಿಯೂರಪ್ಪ ಭೇಟಿ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.