ಗುರುವಾರ , ಮೇ 13, 2021
40 °C

ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್‌ (ರಾಯಚೂರು): ‘ಬಿಜೆಪಿ ಭ್ರಷ್ಟಾಚಾರದ ಸರ್ಕಾರವಾಗಿದೆ. ಬಿ ಎಂದರೆ ಭ್ರಷ್ಟಾಚಾರ, ಜೆಪಿ ಎಂದರೆ ಜನತಾ ಪಾರ್ಟಿ, ಭ್ರಷ್ಟಾಚಾರದಲ್ಲಿ ತೊಡಗಿರುವ ಪಕ್ಷವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಮಸ್ಕಿ ಉಪಚುನಾಣೆಯ ಪ್ರಚಾರಕ್ಕಾಗಿ ಮುದಗಲ್‍ ಪಟ್ಟಣದ ಹೆಲಿಪ್ಯಾಡ್‍ನಲ್ಲಿ ಭಾನುವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಯಡಿಯೂರಪ್ಪ ಅವರು ಕುಳಿತಿರುವ ಹಡಗು ಮುಳುಗುತ್ತಿದೆ. ಅವರದ್ದೇ ಪಕ್ಷದ ಬಸನಗೌಡ ಯತ್ನಾಳ ಅವರು ಸಿಎಂ ಕುರಿತಾದ ಮಾತುಗಳನ್ನಾಡುತ್ತಿದ್ದಾರೆ. ಯಡಿಯೂರಪ್ಪ ಮನೆಗೆ ಹೋಗುತ್ತಾರೆ. ಅವರು ಮತ್ತು ಇಡೀ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಬಿಜೆಪಿಯವರು ದುಡ್ಡು ಹಂಚಿ ಮತ ಕೇಳುತ್ತಿದ್ದಾರೆ. ಇದನ್ನು ನೋಡಿಕೊಂಡು ಕಾಂಗ್ರೆಸ್‍ ಸುಮ್ಮನೆ ಕುಳಿತುಕೊಳ್ಳಲಾರದು. ಪಕ್ಷದವರು ಪ್ರತಿಭಟನೆ ಮಾಡಿದ್ದಾರೆ’ ಎಂದರು.

‘ನೂರಕ್ಕೆ ನೂರರಷ್ಟು ಬಿಜೆಪಿ ಸೋಲುತ್ತದೆ. ಅದಕ್ಕಾಗಿಯೇ ದುಡ್ಡು ಹಂಚಲು ಶುರುಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು