ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್ ನಿಷೇಧ: ಸರ್ಕಾರದ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ– ಸಿದ್ದರಾಮಯ್ಯ

Last Updated 20 ಡಿಸೆಂಬರ್ 2021, 10:28 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಸೋಮವಾರವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಕರ್ನಾಟಕದ ನೆಲ, ಜಲ, ಭಾಷೆ, ಕಾನೂನನ್ನು ಗೌರವಿಸದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ. ಸದನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

‘ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ’ ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.

‘ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ.ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ ಬಿಜೆಪಿ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್‌ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ?’ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಬೆಳಗಾವಿಯ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ‌ಸಂಗೊಳ್ಳಿ ರಾಯಣ್ಣ‌ ಪ್ರತಿಮೆಯನ್ನು ಭಗ್ನಗೊಳಿಸಲಾಗಿತ್ತು.ಇದರ ಹಿಂದೆ ಎಂ.ಇ.ಎಸ್‌ನ ಕೈವಾಡವಿರುವ ಆರೋಪಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ಎಂ.ಇ.ಎಸ್‌ ಅನ್ನು ರಾಜ್ಯದಲ್ಲಿನಿಷೇಧಿಸುವಂತೆ ಕನ್ನಡ ಪರ ಸಂಘಟನೆಗಳು ಒತ್ತಾಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT