ಮಕ್ಕಳ ಸಾವಿನ ನೋವು ಕಂಡಿದ್ದೇನೆ: ಬಿಎಸ್‌ವೈ ಮೊಮ್ಮಗಳ ಸಾವಿಗೆ ಸಿದ್ದರಾಮಯ್ಯ ಕಂಬನಿ

ಬೆಂಗಳೂರು: ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪನವರ ಮೊಮ್ಮಗಳ ಸಾವಿಗೆ ಕಂಬನಿ ಮಿಡಿದಿರುವ ಅವರು, ‘ನನ್ನ ದೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು’ ಎಂದು ಟ್ವೀಟಿಸಿದ್ದಾರೆ.
‘ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
‘ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಸಂತಾಪ ಸೂಚಿಸಿದ್ದಾರೆ.
ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅನುಮಾನಾಸ್ಪದ ರೀತಿಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
‘ಸೌಂದರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ತನಿಖೆಯಿಂದಲೇ ನಿಖರ ಮಾಹಿತಿ ತಿಳಿಯಬೇಕಿದೆ. ಪತಿ ಹಾಗೂ ಕುಟುಂಬದವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹೈಗ್ರೌಂಡ್ಸ್ ಠಾಣೆ ಮೂಲಗಳು ಹೇಳಿವೆ.
ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ.
ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/VuwBzYuXzk— Siddaramaiah (@siddaramaiah) January 28, 2022
ಇದನ್ನೂ ಓದಿ– ಬಿ.ಎಸ್.ಯಡಿಯೂರಪ್ಪ ಮೊಮ್ಮಗಳ ಸಾವು: ಆತ್ಮಹತ್ಯೆ ಶಂಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.