ಮಂಡ್ಯ: ‘ಮೇಲ್ವರ್ಗದಲ್ಲಿನಆರ್ಥಿಕವಾಗಿ ದುರ್ಬಲ ಆದವರಿಗೆ (ಇಡಬ್ಲ್ಯುಎಸ್) ಮೀಸಲಾತಿ ನೀಡಬೇಕು ಎಂದು ಅಂಶ ಸಂವಿಧಾನದಲ್ಲಿ ಇಲ್ಲ. ಹೀಗಾಗಿ ಅವರಿಗೆ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನದ ತಿದ್ದುಪಡಿಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಇಡಬ್ಲ್ಯುಎಸ್ ಮೀಸಲಾತಿ ಸಂಬಂಧ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿತ್ತು. ಆದರೆ, ಈಗ ಅದನ್ನು ಪುನರ್ ಪರಿಶೀಲಿಸುವುದಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಂವಿಧಾನದ ತಿದ್ದುಪಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ’ ಎಂದರು.

ಕೋಲಾರದಲ್ಲಿ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ‘ಹೈಕಮಾಂಡ್ ಹೇಳುವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ’ ಎಂದರು.

ಸಿದ್ದರಾಮಯ್ಯ ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ: ಕಾರಜೋಳ ವ್ಯಂಗ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.