ಶುಕ್ರವಾರ, ಮಾರ್ಚ್ 31, 2023
32 °C

ಸಿದ್ದರಾಮಯ್ಯ ಯಾವುದೇ ಪಾಪ ಮಾಡಿಲ್ಲ: ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಸಿದ್ದರಾಮಯ್ಯ ಅವರು ಯಾವುದೇ ಪಾಪ ಮಾಡಿಲ್ಲ. ಅವರ ನೇತೃತ್ವದಲ್ಲೇ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

‘ಜೆಡಿಎಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿ ಹೋದವರ ಪಾಪದ ಕೊಡ ತುಂಬಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಯಾವತ್ತೂ ಜೆಡಿಎಸ್‌ಗೆ ಮೋಸ ಮಾಡಿಲ್ಲ. ಜೆಡಿಎಸ್‌ನಲ್ಲಿ ನಾಯಕರಾಗಿ ಬೆಳೆಯುತ್ತಿದ್ದ ಕಾರಣ ಅವರನ್ನು ಆ ಪಕ್ಷದಿಂದ ಉಚ್ಚಾಟನೆ ಮಾಡಲಾಯಿತು. ಆದ್ದರಿಂದ ಯಾರೂ, ಯಾವುದೇ ಪಾಪವನ್ನೂ ಮಾಡಿಲ್ಲ’ ಎಂದು ತಿರುಗೇಟು ನೀಡಿದರು.

‘ಜೆಡಿಎಸ್‌ನಿಂದ ಹೊರ ಬಂದ ಬಳಿಕ ಅವರಿಗೆ ಒಳ್ಳೆಯದೇ ಆಗಿದೆ. ಜೆಡಿಎಸ್‌ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು