ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಾಂಕ್‌ ಖರ್ಗೆ ಬೆನ್ನ ಹಿಂದೆ ಕಾಂಗ್ರೆಸ್‌ ಪಕ್ಷವಿದೆ: ಸಿದ್ದರಾಮಯ್ಯ ಟ್ವೀಟ್‌

Last Updated 25 ಏಪ್ರಿಲ್ 2022, 9:38 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಬೆನ್ನ ಹಿಂದೆ ಕಾಂಗ್ರೆಸ್‌ ಪಕ್ಷವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಪಿಎಸ್ಐ ನೇಮಕಾತಿ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್‌ ಕುಮಾರ್‌ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನ ಹಿಂದೆ ಕಾಂಗ್ರೆಸ್‌ ಪಕ್ಷವಿದೆ’ ಎಂದು ತಿಳಿಸಿದ್ದಾರೆ.

‘ಸಚಿವ ಸುನೀಲ್‌ ಕುಮಾರ್‌ ನೀಡಿದ ಹೇಳಿಕೆಯ ಬೆನ್ನಲ್ಲೇ ಸಿಐಡಿ ಪೊಲೀಸರು ಪ್ರಿಯಾಂಕ್‌ ಖರ್ಗೆ ಅವರ ವಿಚಾರಣೆಗೆ ನೋಟಿಸ್‌ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಅಡಿಯಿಂದ ಮುಡಿವರೆಗೆ ಶೇ 100 ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣ ಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT