ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೆಸ್ಸೆಸ್‌ ಬಳಿ ಸರಳ ಪ್ರಶ್ನೆಗಳಿಗೆ ಉತ್ತರವಿಲ್ಲವೆ?: ಸಿದ್ದರಾಮಯ್ಯ

Last Updated 30 ಮೇ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘97 ವರ್ಷಗಳ ಇತಿಹಾಸವಿರುವ ಆರೆಸ್ಸೆಸ್‌ ಬಳಿ ಸರಳ ಪ್ರಶ್ನೆಗಳಿಗೆ ಉತ್ತರವಿಲ್ಲವೆ? ಈ ಸಂಘಟನೆ ಅಷ್ಟೊಂದು ದುರ್ಬಲವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್‌ ಮೂಲಕ ಆರೆಸ್ಸೆಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅವರು, ‘ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ’ ಎಂಬ ಸರಳ ಪ್ರಶ್ನೆಗೆ ಆರ್‌ಎಸ್‌ಎಸ್‌ ಬಳಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ’ ಎಂದಿದ್ದಾರೆ.

‘ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರೆಸ್ಸೆಸ್‌, ಬಿಜೆಪಿಯ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳು ಆರೆಸ್ಸೆಸ್‌ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ, ಸಂಸ್ಕೃತಿ ಯಾವುದು ಎನ್ನುವುದನ್ನು ಸೂಚಿಸುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT