ಮಂಗಳವಾರ, ಆಗಸ್ಟ್ 3, 2021
28 °C

ಹೋಟೆಲ್ ಕ್ಷೇತ್ರಕ್ಕೆ ನೆರವು ಕೊಡಿ: ಸಿದ್ದರಾಮಯ್ಯ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ‘ಹೋಟೆಲ್, ರೆಸಾರ್ಟ್, ವಸತಿಗೃಹಗಳ ಕೋವಿಡ್‌ ಕಾಲದ ವಿದ್ಯುತ್, ನೀರಿನ ಶುಲ್ಕ ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ನೆರವು ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ ₹ 10 ಸಾವಿರ ಘೋಷಿಸಬೇಕು. ತೀವ್ರ ಸಂಕಷ್ಟದಲ್ಲಿರುವ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್‌ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಪ್ಯಾಕೇಜ್ ಘೋಷಿಸಬೇಕು. ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿ ಮುಂದೂಡಬೇಕು. ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಜೊತೆಗೆ, ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬೆಂಗಳೂರು ನಗರ ಮತ್ತು ಅಕ್ಕಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಹೆಚ್ಚು ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಅವರು ಕುಟುಂಬ ನಿರ್ವಹಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಸೇವಾ ವಲಯ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನು ನೆಚ್ಚಿಕೊಂಡಿದ್ದ ವಸತಿಗೃಹಗಳ ಮಾಲೀಕರು ಮತ್ತು ಕೆಲಸಗಾರರು ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ’ ಎಂದೂ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು