ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ನಿಧನಕ್ಕೆ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಅಕ್ಷರ ಗಾತ್ರ

ಬೆಂಗಳೂರು: ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಜಿ.ರಾಜಶೇಖರ ಬುಧವಾರ ಉಡುಪಿ ನಗರದ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

‘ಕನ್ನಡದ ಹಿರಿಯ ವಿಮರ್ಶಕ, ನೇರ-ನಿಷ್ಠುರ ನಡವಳಿಕೆಯ ಪ್ರಖರ ಚಿಂತಕ ಮತ್ತು ಸೌಹಾರ್ದ ಬದುಕಿನ ಹೋರಾಟಗಾರ ಜಿ.ರಾಜಶೇಖರ್ ಅಗಲಿಕೆ ನಮ್ಮೆಲ್ಲರ ಪಾಲಿಗೆ ತುಂಬಿಕೊಳ್ಳಲಾಗದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ದುಡಿದ ಪ್ರಖರ ಚಿಂತಕ, ವಿಮರ್ಶಕ, ಲೇಖಕ ಜಿ.ರಾಜಶೇಖರ್ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಅವರ ಕುಟುಂಬಸ್ಥರಿಗೆ ಸಂತಾಪ ಸಲ್ಲಿಸುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಜಿ.ರಾಜಶೇಖರ ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಮುಖ ಸಾಮಾಜಿಕ ಹೋರಾಟಗಾರು ಹಾಗೂ ಚಿಂತಕರಾಗಿದ್ದ ಜಿ.ರಾಜಶೇಖರ ಜನಪರ ಚಳವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯ ಕೋಮುವಾದದ ವಿರುದ್ಧ ಗಟ್ಟಿಯಾಗಿ ಧನಿ ಎತ್ತುತ್ತಿದ್ದರು.

ನೇರ ನಡೆ ನುಡಿಗೆ ಹೆಸರಾಗಿದ್ದ ಅವರು ಜೀವನದುದ್ದಕ್ಕೂ ಸರಳ ವ್ಯಕ್ತಿತ್ವ ಹಾಗೂ ಆಡಂಬರವಿಲ್ಲದ ಜೀವನ ಶೈಲಿ ಪಾಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT