ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಸೇರ್ಪಡೆ: ಎಚ್‌. ವಿಶ್ವನಾಥ್‌ ಪುತ್ರ

Last Updated 8 ಆಗಸ್ಟ್ 2022, 13:15 IST
ಅಕ್ಷರ ಗಾತ್ರ

ಮೈಸೂರು: ‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ತಿಳಿಸಿದರು.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ‘ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ತಂದೆ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ನಿನ್ನಿಷ್ಟ ಎಂದಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವೆ. ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT