ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ: ಸಿದ್ದರಾಮಯ್ಯ

ಮಡಿಕೇರಿ: ‘ಕೊಡವರೂ ಬೀಫ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪು ಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ; ವಿಶೇಷವಾದ ಗೌರವವೂ ಇದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬೀಫ್ ಕುರಿತು ಅವರು ನೀಡಿದ್ದ ಹೇಳಿಕೆಯಿಂದ ಕೊಡಗು ಜಿಲ್ಲೆಯ ಕೊಡವ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನೂ ಓದಿ...‘ಕೊಡವರೂ ಬೀಫ್ ತಿನ್ನುತ್ತಾರೆ’: ಸಿದ್ದರಾಮಯ್ಯ ಹೇಳಿಕೆಗೆ ಕೊಡವರ ಆಕ್ರೋಶ
ಕೊಡವರೂ ಬೀಪ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ.ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ
ಗೌರವವೂ ಇದೆ.— Siddaramaiah (@siddaramaiah) December 19, 2020
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.