ಮಂಗಳೂರು: ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿಗಳನ್ನು ಕುಟುಕಿದ್ದಾರೆ.

‘ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆ ಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು. ಇಲ್ಲವೇ ಆ ಪಕ್ಷದಲ್ಲಿ ಈ ಮಟ್ಟದ ಬೌದ್ಧಿಕ ದಾರಿದ್ರ್ಯ ಇದ್ದಿರಬಹುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಕಟೀಲ್, 'ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.