ಶುಕ್ರವಾರ, ಏಪ್ರಿಲ್ 23, 2021
28 °C
ಸುರ್ಜೇವಾಲಾ ಪುತ್ರನ ಮದುವೆಯಲ್ಲಿ ಕಾಂಗ್ರೆಸ್‌ ನಾಯಕರ ಮುಖಾಮುಖಿ

ಎಐಸಿಸಿ ಮುಖಂಡರ ಭೇಟಿಯಾದ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರ ಪುತ್ರ ಅರ್ಜುನ್‌ ಮದುವೆಯಲ್ಲಿ ಭಾಗವಹಿಸಲು ಭಾನುವಾರ ದೆಹಲಿ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮದುವೆ ಸಮಾರಂಭದಲ್ಲೇ ಎಐಸಿಸಿಯ ಹಲವು ಮುಖಂಡರನ್ನು ಭೇಟಿ ಮಾಡಿದ್ದಾರೆ.

ಭಾನುವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ರಾತ್ರಿ ಬೆಂಗಳೂರಿಗೆ ವಾಪಸಾದರು. ಮದುವೆ ಸಮಾರಂಭದಲ್ಲೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಹಿರಿಯ ನಾಯಕ ಎ.ಕೆ. ಆ್ಯಂಟನಿ, ಲೋಕಸಭೆಯ ಮಾಜಿ ಸ್ಪೀಕರ್‌ ಮೀರಾ ಕುಮಾರ್‌ ಸೇರಿದಂತೆ ಹಲವು ಮುಖಂಡರನ್ನು ಭೇಟಿ ಮಾಡಿದರು.

ಶಾಸಕರಾದ ಜಮೀರ್‌ ಅಹಮ್ಮದ್ ಖಾನ್, ಬೈರತಿ ಸುರೇಶ್ ಸೇರಿದಂತೆ ಹಲವರು ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ವೇಳೆ ಜತೆಗಿದ್ದರು. ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ಗಮನಕ್ಕೆ ತಾರದೆ ಜೆಡಿಎಸ್‌ಗೆ ಮೇಯರ್‌ ಸ್ಥಾನ ಬಿಟ್ಟುಕೊಟ್ಟಿರುವುದು ಸೇರಿದಂತೆ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ವರಿಷ್ಠರ ಜತೆ ಚರ್ಚಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

‘ಸಿದ್ದರಾಮಯ್ಯ ಅವರ ಮದುವೆ ಸಮಾರಂಭದಲ್ಲಿ ಎಐಸಿಸಿ ಮುಖಂಡರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆಗಳು ನಡೆದಿಲ್ಲ’ ಎಂದು ಸಿದ್ದರಾಮಯ್ಯ ಅವರ ಆಪ್ತ ವಲಯದ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು