ಗುರುವಾರ , ಮೇ 13, 2021
22 °C

ಸಿದ್ದರಾಮಯ್ಯ ತವರು ಸಿದ್ದರಾಮನಹುಂಡಿಯ ರಾಮ ಮಂದಿರ ಉದ್ಘಾಟನೆ ಸೋಮವಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸೋಮವಾರ (ಏ.19) ‘ಕೋದಂಡರಾಮ ಮಂದಿರ’ದ ಉದ್ಘಾಟನೆ ನಡೆಯಲಿದೆ.

ಸುಮಾರು ನೂರು ವರ್ಷದಷ್ಟು ಹಳೆಯದಾದ ಈ ಮಂದಿರವನ್ನು ಸಿದ್ದರಾಮಯ್ಯ ಅವರ ಕುಟುಂಬದವರು ಗ್ರಾಮಸ್ಥರೊಂದಿಗೆ ಸೇರಿ ಜೀರ್ಣೋದ್ಧಾರ ಮಾಡಿದ್ದಾರೆ.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿ
ರುವ ಕಾರಣ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಗ್ರಾಮಸ್ಥರೇ ಸರಳವಾಗಿ ದೇಗುಲ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಹಾಗೂ ಇವರ ತಾಯಿ ಪಾರ್ವತಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ’ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು