ಮಂಗಳವಾರ, ಮೇ 18, 2021
28 °C
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸತೀಶ್‌ ಜಾರಕಿಹೊಳಿ

‘ಮತಗಳೇನು ಬಿಎಸ್‌ವೈ ಜೇಬಿನಲ್ಲಿವೆಯೇ?’–ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಮತಗಳೇನು ಯಡಿಯೂರಪ್ಪನ ಜೇಬಿನಲ್ಲಿವೆಯೇ? ಚುನಾವಣೆಯಲ್ಲಿ ಜನರ ಆಶೀರ್ವಾದವೇ ಅಂತಿಮ. ಉಪಚುನಾವಣೆಯಲ್ಲೂ ಜನ ಸರಿಯಾದ ಉತ್ತರ ನೀಡಲಿದ್ದಾರೆ‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಹೇಳಿದರು.

‌ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಪ್ರತಾಪಗೌಡ ಪಾಟೀಲ ನಮ್ಮ ಪಕ್ಷ ಬಿಟ್ಟು ಹೋದವನು. ಆಪರೇಷನ್‌ ಕಮಲಕ್ಕೆ ಒಳಗಾಗಿರುವ ಆತನಿಗೆ ಇಮೇಜ್‌ ಇಲ್ಲ. ಇದು ಕಾಂಗ್ರೆಸ್‌ಗೆ ಅನುಕೂಲ’ ಎಂದರು.

‘ಉಪಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸತೀಶ್‌ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಶಿಫಾರಸು ಮಾಡಿದ್ದೇವೆ. ಅವರ ಹೆಸರು ಅಂತಿಮವಾಗುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು