ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ, ಈಶ್ವರಪ್ಪ ವಜಾಕ್ಕೆ ರಾಜ್ಯಪಾಲರಿಗೆ ಮನವಿ

Last Updated 22 ಫೆಬ್ರುವರಿ 2022, 10:58 IST
ಅಕ್ಷರ ಗಾತ್ರ

ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ' ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ರಾಜ್ಯದ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿ ನಿರ್ಭಯವಾಗಿ ಕೊಲೆಗಳು ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ' ಎಂದಿದ್ದಾರೆ.

ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆ ಮೂಲಕ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ #ದೇಶದ್ರೋಹಿ_ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ' ಎಂದಿದ್ದಾರೆ.

Law And Order ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, 'ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು. ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ' ಎಂದು ಕಿಡಿಕಾರಿದ್ದಾರೆ.

ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರಿಕ ಸರ್ಕಾರವಾ? ಸಚಿವರೇ ಪಾಲಿಸದ ನಿಯಮವನ್ನು ಜನರು ಪಾಲಿಸುತ್ತಾರಾ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ' ಎಂದು ದೂರಿದ್ದಾರೆ.

ಸಿದ್ದರಾಮಯ್ಯ ಅವರ ಇನ್ನುಳಿದ ಟ್ವೀಟ್‌ಗಳು ಇಲ್ಲಿವೆ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT