ಗುರುವಾರ , ಮಾರ್ಚ್ 23, 2023
21 °C
ಬಿಟ್‌ಕಾಯಿನ್‌ ಹಗರಣ

ಬಿಟ್‌ಕಾಯಿನ್‌: ಪ್ರಜಾವಾಣಿ ವಿಶೇಷ ವರದಿ ಉಲ್ಲೇಖಿಸಿ ಸಿಎಂ ಕೆಣಕಿದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿರುವ ಬಿಟ್‌ ಕಾಯಿನ್ ಹಗರಣದ ಬಗ್ಗೆ ಅ.29 ರಂದು ಪ್ರಕಟವಾಗಿರುವ ಪ್ರಜಾವಾಣಿ ವಿಶೇಷ ವರದಿಯನ್ನು ಉಲ್ಲೇಖಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ತಿ ಬಸವರಾಜ ಬೊಮ್ಮಾಯಿ ಅವರನ್ನು ಕೆಣಕಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಬಿಟ್ ಕಾಯಿನ್ ಹಗರಣದ ಬಗ್ಗೆ ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿವೆ. ಆದರೂ ಸರ್ಕಾರವೇ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ಇದೇ ಪ್ರಕರಣದ ತನಿಖೆಯ ಹೊಣೆಯನ್ನು ವಹಿಸಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು?’ ಎಂದು ಪ್ರಶ್ನಿಸಿದ್ದಾರೆ.

‘ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.  ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ, ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು’ ಎಂದು ಆಗ್ರಹಿಸಿದ್ದಾರೆ.

 

‘ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ 5000 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇವುಗಳನ್ನೂ ಓದಿ

ಬಿಟ್‌ ಕಾಯಿನ್ ಹಗರಣ: ಸರ್ಕಾರಿ ಜಾಲತಾಣದಿಂದ ₹46 ಕೋಟಿ ದೋಚಿದ್ದ ಹ್ಯಾಕರ್ ಶ್ರೀಕಿ!

4ನೇ ತರಗತಿಯಿಂದ ಹ್ಯಾಕಿಂಗ್ ತರಬೇತಿ: ಡಾರ್ಕ್‌ನೆಟ್‌ ಮೂಲಕ ಬಿಟ್‌ ಕಾಯಿನ್‌ ಮಾಹಿತಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು