ವೃದ್ಧಾಪ್ಯ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, 'ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ' ಎಂದು ಹರಿಹಾಯ್ದಿದ್ದಾರೆ.
'ಕೊರೊನಾದಿಂದ ಜನರು ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇದೆ. ಅವರು ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.