ಗುರುವಾರ , ಡಿಸೆಂಬರ್ 1, 2022
27 °C

PFI Ban: ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಐದು ವರ್ಷದ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎಂದು ಹೇಳಿದ್ದಾರೆ. 

ಇದನ್ನೂ ಓದಿ: 

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ  ಸಂಸ್ಥೆಗಳು ಹಿಂದು, ‌ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ. 

ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದು ಟ್ವೀಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು