ಬಾಗಲಕೋಟೆ: ಜಿಲ್ಲೆಯ ಬಾದಾಮಿಯಲ್ಲಿ ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ರೋಡ್ ಶೋ ನಡೆಸುವರು. ಕ್ಷೇತ್ರ ಆಯ್ಕೆ ಕುರಿತ ಚರ್ಚೆ ನಡೆದಿರುವ ಹಿನ್ನೆಲೆಯಲ್ಲಿ ಅವರ ರೋಡ್ ಶೋ ಮಹತ್ವ ಪಡೆದುಕೊಂಡಿದೆ.
ಬಾದಾಮಿಯ ರಾಮದುರ್ಗ ಕ್ರಾಸ್‌ನಿಂದ ಎಪಿಎಂಸಿ ಆವರಣದವರೆಗೆ ಮಧ್ಯಾಹ್ನ 12.30ಕ್ಕೆ ರೋಡ್ ಶೋ ನಡೆಸಲಿದ್ದಾರೆ.
‘ಮಧ್ಯಾಹ್ನ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 30 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಹೊಳೆಬಸು ಶೆಟ್ಟರ್ ತಿಳಿಸಿದ್ದಾರೆ. ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸ ಬೇಕು ಎಂದು ಅವರ ಬೆಂಬಲಿಗರು ಆಗ್ರಹಿಸು ತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.