ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ ಡೌನ್ ಜಾರಿಯಾದರೆ ಬಿಜೆಪಿಯೇ ಹೊಣೆ: ಸಿದ್ದರಾಮಯ್ಯ

Last Updated 11 ಜನವರಿ 2022, 9:06 IST
ಅಕ್ಷರ ಗಾತ್ರ

ರಾಮನಗರ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾದರೆ ಅದಕ್ಕೆ ಬಿಜೆಪಿಯೇ ಕಾರಣ ಹೊರತು ಕಾಂಗ್ರೆಸ್ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕನಕಪುರದಲ್ಲಿ ಮಂಗಳವಾರ ಮೇಕೆದಾಟು ಮೂರನೇ ದಿನದ ಪಾದಯಾತ್ರೆ ಆರಂಭಕ್ಕೆ ಮುನ್ನ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ಸರ್ಕಾರ ನಿರ್ವಹಿಸಲಿಲ್ಲ. ಬಿಜೆಪಿ ನಾಯಕರೇ ಕಾರ್ಯಕ್ರಮಗಳನ್ನು ಮಾಡಿದರು. ಈಗ ಪಾದಯಾತ್ರೆ ಸಲುವಾಗಿ ಲಾಕ್ ಡೌನ್ ನಾಟಕ ಆರಂಭ ಆಗಿದೆ ಎಂದು ದೂರಿದರು.

ಪಾದಯಾತ್ರೆ‌ ಮಾಡಿದ್ದಕ್ಕೆ 31 ಜನರ ಮೇಲೆ ಕೇಸು ಹಾಕಿಸಿದ್ದೀರಿ. ಅದೇ ಬಿಜೆಪಿ ನಾಯಕರು ಕಾರ್ಯಕ್ರಮ ಮಾಡಿದಾಗ ಯಾರ ಮೇಲೆ ಕೇಸ್ ಹಾಕಿದ್ದೀರಿ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಲಾಕ್ ಡೌನ್ ಹಾಕುವಷ್ಟು ಪರಿಸ್ಥಿತಿ ಹದಗೆಟ್ಟಿಲ್ಲ. ಕಳೆದ ಬಾರಿ ಲಾಕ್ ಡೌನ್ ನಿಂದ ಲಕ್ಷಾಂತರ ಮಂದಿ ಸಂಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಗೃಹ ಸಚಿವರು ಎಲ್ಲವನ್ನೂ ಅರಿತು ಮಾತನಾಡಬೇಕು ಎಂದರು.

ಕಾಂಗ್ರೆಸ್‌ನವರು ಪಾದಯಾತ್ರೆ ನಡೆಸಬಾರದು. ಇದರಿಂದ ಕಾಂಗ್ರೆಸ್‌ಗೆ ಬಲ ಬರುತ್ತದೆ ಎಂದು ತಡೆಯುವ ಪ್ರಯತ್ನ ನಡೆಯುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಕೆಲಸ ನಡೆಯುತ್ತಿದೆ. ಬಿಜೆಪಿ ನಾಯಕರ ಮಾತುಗಳು ಅದೇ ರೀತಿ ಇವೆ. ನಾವು‌ ಕರ್ನಾಟಕದ ಜನರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಜನರಿಗೆ ನ್ಯಾಯ ಕೊಡಿಸುತ್ತೇವೆ ಎಂದರು.

ಎರಡು ದಿನ ಪಾದಯಾತ್ರೆ ಯಶಸ್ವಿಯಾಗಿ ನಡೆದಿದೆ. ಮಂಗಳವಾರ ಮೈಸೂರು‌ ಜಿಲ್ಲೆಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT