ಶನಿವಾರ, ಅಕ್ಟೋಬರ್ 16, 2021
22 °C

ದೇವೇಗೌಡರದ್ದು ಪುಟಗೋಸಿ ರಾಜಕಾರಣವಾ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ‘ಪುಟಗೋಸಿ ವಿರೋಧ ಪಕ್ಷದ ನಾಯಕನಾಗಲು ನಾನು ಸಮ್ಮಿಶ್ರ ಸರ್ಕಾರ ಕೆಡವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಿದ್ದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಕುಮಾರಸ್ವಾಮಿ ಅವರಿಗಿರುವ ಗೌರವ ಏನೆಂಬುದು ಅವರ ಹೇಳಿಕೆಯಿಂದ ವ್ಯಕ್ತವಾಗಿದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ದೇವೇಗೌಡರು ಪ್ರತಿಪಕ್ಷ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ಪ್ರಶ್ನಿಸಿದ್ದಾರೆ.

ಓದಿ: 

ನನ್ನದು ಕಾಂಗ್ರೆಸ್ ವಿರುದ್ಧ ಅಲ್ಲ, ಸಿದ್ದರಾಮಯ್ಯ ವಿರುದ್ಧ ಹೋರಾಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ನನ್ನ ಬಗ್ಗೆ ಭಯವಿದೆ. ಹಾಗಾಗಿ ನನ್ನ ವಿರುದ್ಧ ಮಾತನಾಡುತ್ತಾರೆ ಅಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು