ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

#NationalUnemploymentDay ಅಭಿಯಾನ ಬೆಂಬಲಿಸಿದ ಸಿದ್ದರಾಮಯ್ಯ

Last Updated 17 ಸೆಪ್ಟೆಂಬರ್ 2020, 10:28 IST
ಅಕ್ಷರ ಗಾತ್ರ

ಬೆಂಗಳೂರು: ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಕೆಲ ಮಂದಿ ಆರಂಭಿಸಿರುವ#NationalUnemploymentDay ಅಭಿಯಾಯನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ,’ ಎಂದಿದ್ದಾರೆ.

‘ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ,’ ಎಂದು ಅವರು ತಿಳಿಸಿದ್ದಾರೆ.

ಇದೇ ಟ್ವೀಟ್‌ನಲ್ಲಿ ಅವರು#NationalUnemploymentDay ಟ್ಯಾಗ್‌ ಬಳಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT