ಗುರುವಾರ , ಜೂನ್ 24, 2021
27 °C

ಅರಸು ಪ್ರಶಸ್ತಿ ನೀಡದೆ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಸರ್ಕಾರ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಮುಖ್ಯಮಂತ್ರಿಗೆ, ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗುರುವಾರ ಟ್ವೀಟ್‌ ಮಾಡಿರುವ ಅವರು, ‘ರಾಜ್ಯ ಬಿಜೆಪಿ ಸರ್ಕಾರದ ನಡೆ ಖಂಡನೀಯ’ ಎಂದಿದ್ದಾರೆ.

‘ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ‌ ಮಾಡಿ, ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ’ ಎಂದೂ ಮುಖ್ಯಮಂತ್ರಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಆಗಸ್ಟ್‌ 20ರಂದು ಅರಸು ಜನ್ಮದಿನವಾಗಿದ್ದು, ಅರಸು ಅವರ ಹೆಸರಿನಲ್ಲೇ ಅದೇ ದಿನ ಪ್ರಶಸ್ತಿ ನೀಡುವ ಪದ್ಧತಿಯನ್ನು ಸರ್ಕಾರ ನಡೆಸಿಕೊಂಡು ಬಂದಿತ್ತು. ‍ಪ್ರಶಸ್ತಿ ಪ್ರದಾನ ಮಾಡದೇ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು