ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು.