ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ಹತ್ಯೆ: ಕೊಲೆಗಡುಕರನ್ನು ತಕ್ಷಣ ಬಂಧಿಸುವಂತೆ ಸಿದ್ದರಾಮಯ್ಯ ಒತ್ತಾಯ

Last Updated 27 ಜುಲೈ 2022, 8:02 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಹತ್ಯೆ ಕುರಿತ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (32) ಅವರನ್ನು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿ ಆಗಿದೆ. ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದರು.

ಪ್ರವೀಣ್ ಅವರು, ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT