ಬುಧವಾರ, ಮೇ 18, 2022
24 °C

ಕೋವಿಡ್‌ ಸಾವಿನ ಮರು ಎಣಿಕೆಯಿಂದ ನ್ಯಾಯ ಸಾಧ್ಯ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ನಿಂದ ಸತ್ತವರಿಗೆ ಪರಿಹಾರ ಕೊಡುವುದನ್ನು ತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿನ ಸುಳ್ಳು ಲೆಕ್ಕ ಹೇಳಿ ಮೋಸ ಮಾಡಿದೆ. ಹೀಗಾಗಿ ಲಕ್ಷಾಂತರ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಸಾವಿನ ಮರುಎಣಿಕೆಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ಕೇಂದ್ರ ಸರ್ಕಾರದ ಪ್ರಕಾರ ಕೋವಿಡ್‌ನಿಂದ ಸತ್ತವರ ಸಂಖ್ಯೆ 4.81 ಲಕ್ಷ. ಡಬ್ಲ್ಯುಎಚ್ಒ ಪ್ರಕಾರ 47.40 ಲಕ್ಷ. ಕೇಂದ್ರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಬಯಲುಗೊಳಿಸಿದೆ’ ಎಂದಿದ್ದಾರೆ.

‘ರಾಜ್ಯದಲ್ಲಿ ಕೋವಿಡ್‌ನಿಂದ ಸತ್ತವರು ಕೇವಲ 37,603 ಎಂದು ರಾಜ್ಯ ಸರ್ಕಾರ ಹೇಳಿತ್ತು. ಕೆಪಿಸಿಸಿ ಸಮೀಕ್ಷೆ ಪ್ರಕಾರ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಪ್ರಕಾರ ಸಾವಿನ ಸಂಖ್ಯೆ 4 ಲಕ್ಷ. ಕಳೆದ ಜೂನ್‌ನಲ್ಲಿಯೇ ಈ ವಿಷಯ ಹೇಳಿದ್ದೆ. ರಾಜ್ಯದಲ್ಲಿ ಈವರೆಗೆ 5 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದೆ. ಮರು ಸಮೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮೃತರ ಕುಟುಂಬಕ್ಕೆ ಕನಿಷ್ಠ ₹4 ಲಕ್ಷ ಪರಿಹಾರ ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು