ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ

Last Updated 17 ಏಪ್ರಿಲ್ 2021, 6:07 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕರು ಕೇವಲ ಚುನಾವಣೆಯ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತಿದ್ದು, ಆಡಳಿತದ ಬಗ್ಗೆ ಗಮನ ಹರಿಸದೇ ಇರುವುದು ನಿಜಕ್ಕೂ ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕಿಸಿದ್ಧಾರೆ.

ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಶಿಷ್ಟಾಚಾರಗಳನ್ನು ತಾವೇಕೆ ಅನುಸರಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ತುಂಬಿರುವುದರಿಂದ, ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಸಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಶುಲ್ಕವನ್ನು ಭರಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾದ ರೋಗಿಗಳಿಗೆ ಕೋವಿಡ್ 19 ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋವಿಡ್ 19 ಎರಡನೇ ಅಲೆಯ ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಗಳ ದುರ್ಬಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಹಿರಂಗಗೊಂಡಿದೆ ಎಂದು ಅವರು ಟೀಕಿಸಿದ್ದಾರೆ.

ಕೋವಿಡ್ 19 ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗದೆ ಜನರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿಯೇ ಅದರ ಗಂಭೀರ ಸ್ವರೂಪದ ದರ್ಶನವಾಗಿದೆ. ಆದರೂ, ಸರ್ಕಾರಗಳು ಪಾಠ ಕಲಿತಿಲ್ಲ. ಕೋವಿಡ್ ಚಿಕಿತ್ಸೆಗೆ ಹೆಚ್ಚಾಗಿ ಬಳಸಲಾಗುವ ರೆಮ್‌ಡಿಸಿವರ್ ಔಷಧಿ ಸ್ಟಾಕ್ ಇಲ್ಲದಾಗಿದೆ. ಸರ್ಕಾರವು ಔಷಧಿಗಳ ದಾಸ್ತಾನು ಏಕೆ ಮಾಡಿಕೊಂಡಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT