ಶನಿವಾರ, ಆಗಸ್ಟ್ 13, 2022
26 °C
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಳಗಿದ ಘೋಷಣೆ

ಬಾದಾಮಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆಗೆ ಬೆಂಬಲಿಗರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಸಡಿಲಿಕೆಯ ನಂತರ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಬಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ  ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಭರ್ಜರಿ ಸ್ವಾಗತ ಕೋರಿದರು.
 
ಸಿದ್ದರಾಮಯ್ಯ ಮಧ್ಯಾಹ್ನ ಬಾಗಲಕೋಟೆ ಜಿಲ್ಲೆ ಪ್ರವೇಶಿಸುತ್ತಿದ್ದಂತೆಯೇ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ನ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಕಾರಿಗೆ ಪುಷ್ಪವೃಷ್ಟಿ ಮಾಡಿದರು. ಮಳೆಯನ್ನು ಲೆಕ್ಕಿಸದೇ ನೆರೆದಿದ್ದವರಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ಇದನ್ನೂ ಓದಿ: 

ಈ ವೇಳೆ ಕಾರು ನಿಲ್ಲಿಸಿ ನೆರೆದವರತ್ತ ಸಿದ್ದರಾಮಯ್ಯ ಕೈ ಬೀಸಿದರು. ಆಗ ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಅಲ್ಲಿದ್ದವರು ಒತ್ತಾಯಿಸಿದರು. ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಜಯಘೋಷದ ನಡುವೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಯೂ ಕೇಳಿಬಂದಿತು. 

ಸಿದ್ದರಾಮಯ್ಯ ಅವರೊಂದಿಗೆ ಪಕ್ಷದ ಸ್ಥಳೀಯ ಮುಖಂಡರು ಜೊತೆಗೆ ಇದ್ದರು. ಬೆಂಬಲಿಗರತ್ತ ಕೈ ಬೀಸುತ್ತಾ ಸಿದ್ದರಾಮಯ್ಯ ಬಾದಾಮಿ ಪಟ್ಟಣದತ್ತ ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು