ಭಾನುವಾರ, ಏಪ್ರಿಲ್ 11, 2021
29 °C
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ

ಸಿದ್ದರಾಮಯ್ಯಗೆ ಪ್ರತಿಪಕ್ಷ ಸ್ಥಾನವೇ ಕಾಯಂ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ’ಮನಸ್ಸಿನ ಮೇಲೆ ಹಿಡಿತ ಕಳೆದುಕೊಂಡು ಏನೇನೋ ಮಾತನಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನವೇ ಕಾಯಂ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಸೋಮವಾರ ಬಜೆಟ್‌ ಮಂಡಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಜೆಟ್‌ ಮಂಡನೆಯ ಸಂದರ್ಭದಲ್ಲಿ ವಿರೋಧ ಪಕ್ಷದವರು ಪ್ರತಿಭಟನೆ ನಡೆಸುವುದು, ಸಭಾತ್ಯಾಗ ಮಾಡುವುದು ಇತಿಹಾಸದಲ್ಲಿ ಯಾವತ್ತೂ ನಡೆದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮುಂದಿನ ಚುನಾವಣೆಯಲ್ಲೂ 130ರಿಂದ 135 ಸ್ಥಾನಗಳನ್ನು ಗೆಲ್ಲಿಸಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ. ಇವರು ಕಾಯಂ ವಿರೋಧ ಪಕ್ಷದ ಸ್ಥಾನದಲ್ಲೇ ಕುಳಿತಿರಬೇಕು. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರದಿದ್ದರೆ ನನ್ನನ್ನು ಯಡಿಯೂರಪ್ಪ ಎಂದು ಕರೆಯಬೇಡಿ’ ಎಂದು ಸವಾಲು ಹಾಕಿದರು.

ಸಿ.ಡಿ ವಿಚಾರದಲ್ಲಿ ಮೊದಲು ಚರ್ಚೆಗೆ ಬರಲಿ. ಸೂಕ್ತ ಸಲಹೆ ನೀಡಲಿ. ಅದನ್ನು ಬಿಟ್ಟು ನೈತಿಕತೆ ಎಂದು ಏನೇನೋ ಮಾತನಾಡುವುದು ಸರಿಯಲ್ಲ. ಅಗತ್ಯವಿದ್ದರೆ ಯಾವುದೇ ತನಿಖೆಗೂ ಆದೇಶಿಸಲು ಸಿದ್ಧ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದು ನಯಾ ಪೈಸೆಯಷ್ಟು ತೆರಿಗೆಯನ್ನೂ ಯಾರ ಮೇಲೂ ಹೇರಿಲ್ಲ. ಪೆಟ್ರೋಲ್‌ ಮತ್ತು ಡೀಸೆಲ್‌ ದರ ದೇಶದಲ್ಲೇ ಕಡಿಮೆ ಇರುವುದು ಕರ್ನಾಟಕದಲ್ಲಿ. ಆದ್ದರಿಂದ ಮತ್ತೆ ತೆರಿಗೆ ಕಡಿಮೆ ಮಾಡುವ ಪ್ರಮೇಯವೇ ಇಲ್ಲ. ವಿವಿಧ ಸಮುದಾಯಗಳ ನಿಗಮಗಳಿಗೆ ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲು ಸಿದ್ಧ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು