ಬುಧವಾರ, ಡಿಸೆಂಬರ್ 8, 2021
25 °C

ಗಾಂಧೀಜಿಯವರನ್ನೇ ಬಿಡದವರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ? –ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ‘ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ?’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ‘ಸಬ್ ಕೋ ಸನ್ಮತಿ ದೇ ಭಗವಾನ್’ ಎಂಬ ಮಾತನ್ನು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ– ಎಚ್‌.ಡಿ. ಕುಮಾರಸ್ವಾಮಿ ನಡುವಿನ ಆರೋಪ– ಪ್ರತ್ಯಾರೋಪ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಮಾರ್ಮಿಕವಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು