ಶನಿವಾರ, ಜುಲೈ 24, 2021
23 °C
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ

ಸಿಎಂಗೆ ಕುರ್ಚಿ ಚಿಂತೆ, ಮಗನಿಗೆ ದುಡ್ಡಿನ ಚಿಂತೆ: ಸಿದ್ದರಾಮಯ್ಯ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ’ಮುಖ್ಯಮಂತ್ರಿ ಯಡಿಯೂರಪ್ಪ ಕುರ್ಚಿ ಅಲುಗಾಡಲು ಶುರುವಾಗಿ ಬಹಳ ದಿನವಾಗಿದೆ. ಅಪ್ಪನಿಗೆ ಕುರ್ಚಿ ಉಳಿಸಿಕೊಳ್ಳುವುದು. ಮಗನಿಗೆ ದುಡ್ಡು ಹೊಡೆಯುವುದು ಇವೆರಡೇ ಕೆಲಸ ಸರ್ಕಾರದಲ್ಲಿ ನಡೆಯುತ್ತಿದೆ‘ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೆಲಸ ಮಾಡುವುದು ಬಿಟ್ಟು ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಅವರ ಪುತ್ರ ಭ್ರಷ್ಟಾಚಾರದ ಮೂಲಕ ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ. ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಸಬ್‌ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಗೂ ಒಂದು ಗ್ಯಾಂಗ್ ಮಾಡಿಕೊಂಡಿದ್ದಾರೆ. ಇದನ್ನು ಅಧಿಕಾರಿಯೊಬ್ಬರು ನನಗೆ ಹೇಳಿದರು. ಇದರಲ್ಲಿ ನೂರಾರು ಕೋಟಿ ಅವ್ಯವಹಾರ ನಡೆಯುತ್ತಿದೆ ಎಂದರು.

ರಾಜ್ಯದಲ್ಲಿ ಮತ್ತೆ ಅಕ್ರಮ ಗಣಿಗಾರಿಕೆ ಶುರುವಾಗಿದೆ. ಶಿಕಾರಿಪುರ, ಶಿವಮೊಗ್ಗ, ಚಿಕ್ಕಬಳ್ಳಾಪುರದಲ್ಲೂ ಅವ್ಯಾವಹತವಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಅದನ್ನು ನಿಲ್ಲಿಸುವ ಜವಾಬ್ದಾರಿ ಸರ್ಕಾರದ್ದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು