ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಟ್‌ ಕಾಯಿನ್ ಹಗರಣ: ಕಾಂಗ್ರೆಸ್‌ನವರು ಭಾಗಿಯಾಗಿದ್ದರೆ ಬಂಧಿಸಲಿ; ಸಿದ್ದರಾಮಯ್ಯ

Last Updated 13 ನವೆಂಬರ್ 2021, 13:02 IST
ಅಕ್ಷರ ಗಾತ್ರ

ಬಾಗಲಕೋಟೆ: ’ಬಿಟ್ ಕಾಯಿನ್‌ ಹಗರಣದಲ್ಲಿ ಕಾಂಗ್ರೆಸ್‌ನವರು ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಿದ್ದಾರೆ. ಹಾಗಿದ್ದರೆ ಅವರ ಹೆಸರು ಬಹಿರಂಗಪಡಿಸಿ ಬಂಧಿಸಲಿ‘ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಹಗರಣದಲ್ಲಿ ಬಿಜೆಪಿಯಇಬ್ಬರು ಪ್ರಭಾವಿ ನಾಯಕರು ಇದ್ದಾರೆ ಅನ್ನೋ ಮಾಹಿತಿ ನಮಗೆ ಇದೆ. ಹಗರಣದ ತನಿಖೆ ಮಾಡಿಸುವ ಅಧಿಕಾರ ಇರೋದು ಮುಖ್ಯಮಂತ್ರಿಗೆ. ಹೀಗಾಗಿ ಅವರೇಹೆಸರು ಬಹಿರಂಗಪಡಿಸಲಿ. ಆಗ ಹಗರಣದಲ್ಲಿ ಕಾಂಗ್ರೆಸ್‌ನವರು, ಬಿಜೆಪಿಯವರು ಇಲ್ಲವೇ ಜೆಡಿಎಸ್‌ನವರು ಇದ್ದರೆ ಗೊತ್ತಾಗಲಿದೆ‘ ಎಂದರು.

ಪೊಲೀಸರು ಆರೋಪಿ ಶ್ರೀಕಿಯಿಂದ ಬಿಟ್ ಕಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗೆ ವಶಕ್ಕೆ ಪಡೆದ ಬಿಟ್ ಕಾಯಿನ್ ಯಾರ ಬಳಿ ಹೋಗಿದೆ. ಯಾರ ಖಾತೆಗೆ ವರ್ಗಾವಣೆ ಆಗಿದೆ. ಪೊಲೀಸರಿಗೆ ಹೋಗಿದೆಯಾ? ರಾಜಕಾರಣಿಗಳಿಗೆ ಹೋಗಿದೆಯಾ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ಹೇಳಬೇಕಲ್ವಾ. ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಬರುವುದರಿಂದ ಈ ವಿಚಾರದಲ್ಲಿ ಸ್ವತಂತ್ರವಾಗಿ ತನಿಖೆ ಮಾಡಲಿದ್ದಾರೆ ಎಂಬುದರ ಬಗ್ಗೆಯೂ ನಮಗೆ ಅನುಮಾನವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT