ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮೋತ್ಸವ: ರಾಹುಲ್ ಗಾಂಧಿಗಾಗಿ ಹುಬ್ಬಳ್ಳಿಯಲ್ಲಿ ಕಾಯುತ್ತಿರುವ ಕಾರ್ಯಕರ್ತರು

Last Updated 2 ಆಗಸ್ಟ್ 2022, 14:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಗೋಕುಲ‌ ರಸ್ತೆಯ ವಿಮಾನ ನಿಲ್ದಾಣದ ಎದುರು ಕಾಂಗ್ರೆಸ್ ನಾಯಕ‌ ರಾಹುಲ್ ಗಾಂಧಿ ಅವರ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.

ರಾಹುಲ್ ಅವರಿಗೆ ಸ್ವಾಗತ ಕೋರುವ ಬೃಹತ್ ಕಟೌಟ್ ಗಳು, ಬ್ಯಾನರ್'ಗಳು ರಾರಾಜಿಸುತ್ತಿದ್ದು, ಬೃಹತ್‌ ಡಿಜಿಟಲ್‌ ಪರದೆ ಅಳವಡಿಸಲಾಗಿದೆ. ಜಗ್ಗಲಗಿ, ಬ್ಯಾಂಡ್ ವಾದನಕ್ಕೆ‌‌ ಕಾರ್ಯಕರ್ತರು ನೃತ್ಯ ಮಾಡಿ‌ ಸಂಭ್ರಮಿಸುತ್ತಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದ‌ ಮೂಲಕ‌ ರಾತ್ರಿ 8.30ರ ಸುಮಾರಿಗೆ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಬರಲಿದ್ದಾರೆ. ಇಂದು ಅವರು ನಗರದಲ್ಲೇ ವಾಸ್ತವ್ಯ ಮಾಡಲಿದ್ದು, ಬುಧವಾರ ಬೆಳಿಗ್ಗೆ ದಾವಣಗೆರೆಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT