ಶನಿವಾರ, ಅಕ್ಟೋಬರ್ 16, 2021
29 °C

ಸೋನಿಯಾ ಕರೆ: ಮಂಗಳವಾರ ಬೆಳಿಗ್ಗೆ ದೆಹಲಿಗೆ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕರೆಯ ಮೇರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಮಧ್ಯಾಹ್ನ 12.30ಕ್ಕೆ ಸೋನಿಯಾ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಹೀಗಾಗಿ, ಬೆಳಿಗ್ಗೆ 7.30ರ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

‘ದೆಹಲಿಗೆ ಬರುವಂತೆ ಸೋನಿಯಾ ಗಾಂಧಿ ಅವರಿಂದ ದಿಢೀರ್‌ ಆಹ್ವಾನ ಬಂದಿದೆ. ಯಾವ ವಿಷಯ ಕುರಿತು ಚರ್ಚಿಸಲು ಎಂಬ ಬಗ್ಗೆ ಮಾಹಿತಿ ಇಲ್ಲ. ಉಪ ಚುನಾವಣೆ ನಡೆಯಲಿರುವ ಹಾನಗಲ್‌ ಕ್ಷೇತ್ರದ ಟಿಕೆಟ್‌ ಹಂಚಿಕೆ, ಕೆಪಿಸಿಸಿ ಪುನರ್‌ ರಚನೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು