ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್‍ಕುಮಾರ್ ಕಟೀಲ್

Last Updated 29 ನವೆಂಬರ್ 2022, 17:26 IST
ಅಕ್ಷರ ಗಾತ್ರ

ಬೆಂಗಳೂರು: ಸೈಲೆಂಟ್ ಸುನಿಲ್‌ಗೆ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಸೈಲೆಂಟ್ ಸುನಿಲ್‌ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.

ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

‘ಕಾಂಗ್ರೆಸ್‌ ರೌಡಿ ಶೀಟರ್‌ಗಳ ಲೆಕ್ಕ ಹಾಕಲಿ’

ನವದೆಹಲಿ: ‘ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಂಗಳವಾರ ಅವರು ಪ‍್ರತಿಕ್ರಿಯಿಸಿದರು.

ಈ ಸಂಬಂಧ ಸಂಜೆ ಟ್ವೀಟ್‌ ಮಾಡಿದ ಅವರು, ‘ರೌಡಿ ಶೀಟರ್‌ಗಳ ಕುರಿತ ಪತ್ರಕರ್ತರ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷ ಯಾವುದೇ ರೌಡಿ ಶೀಟರ್‌ಗಳಿಗೆ ಮನ್ನಣೆ ನೀಡುವುದಿಲ್ಲ. ಜತೆಗೆ ಸಹಿಸುವುದೂ ಇಲ್ಲ. ರೌಡಿ ಶೀಟರ್‌ ಸೈಲೆಂಟ್‌ ಸುನೀಲ್‌ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಸಿಬಿಯವರಿಗೆ ಧೈರ್ಯ ಬರುತ್ತಾ?: ಸಿದ್ದರಾಮಯ್ಯ

ಶಿವಮೊಗ್ಗ: ‘ರೌಡಿಶೀಟರ್ ಸೈಲೆಂಟ್ ಸುನೀಲ್‌, ಬಿಜೆಪಿ ಮುಖಂಡರ ಜೊತೆ ಇದ್ದರೆ ಅವನನ್ನು ಬಂಧಿಸುವ ಧೈರ್ಯ ಸಿಸಿಬಿ ಪೊಲೀಸರಿಗೆ ಹೇಗೆ ಬರುತ್ತದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

‘ಡಕಾಯಿತಿ, ಕೊಲೆ ಪ್ರಕರಣ ದಲ್ಲಿರುವ ಸೈಲೆಂಟ್‌ ಸುನೀಲ್‌ನ ಜೊತೆ ಬಿಜೆಪಿ ಮುಖಂಡರಾದ ತೇಜಸ್ವಿ ಸೂರ್ಯ, ಮೋಹನ್ ಹೋಗಿದ್ದಾರೆ‌. ಇವರು ನೀತಿ ಹೇಳೋದು ಬದನೆಕಾಯಿ ತಿನ್ನೋಕಾ’ ಎಂದು ತರಾಟೆಗೆ ತೆಗೆದುಕೊಂಡರು.

‘ಸಿಸಿಬಿಯವರು ಸೈಲೆಂಟ್ ಸುನೀಲ್‌ನ ಹುಡುಕುತ್ತಾ ಇದ್ದಾರೆ. ಆಡಳಿತ ಪಕ್ಷದ ಶಾಸಕರು, ಸಂಸದರು ಅವನ ಜೊತೆಗಿದ್ರೆ ಕಾನೂನು ಕ್ರಮ ಕೈಗೊಳ್ಳೋಕೆ, ಶಿಕ್ಷೆ ಕೊಡಿಸೋಕೆ ಹೇಗೆ ಧೈರ್ಯ ಬರುತ್ತದೆ’ ಎಂದು ಪ್ರಶ್ನಿಸಿದರು.

‘ಬಿಜೆಪಿ ನಾಯಕರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿಲ್ಲ. ಅಮಿತ್ ಶಾ ಅವರೇ ಕೊಲೆ ಪ್ರಕರಣದಲ್ಲಿ ಇದ್ದರು. ಅವರ ವಿರುದ್ಧ ಗಡಿಪಾರು ಆದೇಶವಿತ್ತು. ಹೀಗಿರುವಾಗ ಮೊಹಮ್ಮದ್ ನಲಪಾಡ್ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT