ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರ ವಿರುದ್ಧ ಅಭಿಮಾನಿಗಳ ಟೀಕೆಗೆ ಬಿ.ವೈ.ವಿಜಯೇಂದ್ರ ಖಂಡನೆ

ಪಕ್ಷ ನೀಡುವ ಜವಾಬ್ದಾರಿ ನಿರ್ವಹಿಸುವೆ ಎಂದ ವಿಜಯೇಂದ್ರ
Last Updated 4 ಅಕ್ಟೋಬರ್ 2021, 11:13 IST
ಅಕ್ಷರ ಗಾತ್ರ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಉಸ್ತುವಾರಿ ಪಟ್ಟಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಇಲ್ಲದೇ ಇರುವುದು ಅವರ ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಇದಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ವಿಜಯೇಂದ್ರ, ‘ಎರಡು ಕ್ಷೇತ್ರಗಳ ಉಪಚುನಾವಣೆಯ ಉಸ್ತುವಾರಿ ಪಟ್ಟಿಯಲ್ಲಿ ನನ್ನ ಹೆಸರಿಲ್ಲ ಎನ್ನುವ ಕಾರಣಕ್ಕೆ ಕೆಲವು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದು ಸರಿಯಲ್ಲ, ಇದನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.

‘ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ. ಭಿನ್ನಾಭಿಪ್ರಾಯದ ಧ್ವನಿಗಳಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ವಿರೋಧ ಪಕ್ಷಗಳಿಗೆ ಪರೋಕ್ಷ ನೆರವು ನೀಡಿದಂತಾಗುತ್ತದೆ’ ಎಂದು ಹೇಳಿದ್ದಾರೆ.

‘ಪಕ್ಷದ ತೀರ್ಮಾನದಂತೆ ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯ ನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಹಮತಿ ಇಲ್ಲ. ನಮ್ಮ ಎಲ್ಲಾ ಪ್ರಯತ್ನಗಳನ್ನೂ ಪಕ್ಷದ ಹಿತ ಮತ್ತು ಗೆಲುವಿಗಾಗಿ ವಿನಿಯೋಗಿಸೋಣ’ ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಈ ಹಿಂದೆ ನಡೆದ ಉಚುನಾವಣೆಗಳಲ್ಲಿ ಕೆ.ಆರ್‌.ಪೇಟೆ ಮತ್ತು ಶಿರಾ ಕ್ಷೇತ್ರಗಳಲ್ಲಿ ವಿಜಯೇಂದ್ರ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಆ ಎರಡೂ ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿತು. ಆ ಬಳಿಕ ಉಪಚುನಾವಣೆಗಳಿಗೆ ವಿಜಯೇಂದ್ರ ಉಸ್ತುವಾರಿ ಮಾಡಬೇಕು ಎಂಬ ಬೇಡಿಕೆ ಪಕ್ಷದಲ್ಲಿ ಹೆಚ್ಚಿತು. ಆದರೆ, ಈ ಬಾರಿ ಉದ್ದೇಶಪೂರ್ವಕವಾಗಿಯೇ ಚುನಾವಣೆ ಉಸ್ತುವಾರಿಯಿಂದ ದೂರ ಇಡಲಾಗಿದೆ ಎಂಬ ವ್ಯಾಖ್ಯಾನ ಪಕ್ಷದ ವಲಯದಲ್ಲಿ ಕೇಳಿ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT