ಬೆಂಗಳೂರು: ಹಾನಗಲ್ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಪಟ್ಟಿಗೆ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಸೇರಿಸಿ ಬಿಜೆಪಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.
ವಿಜಯೇಂದ್ರ ಅವರನ್ನು ಉಸ್ತುವಾರಿ ಪಟ್ಟಿಯಲ್ಲಿ ಸೇರಿಸದ ಕಾರಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅಭಿಮಾನಿಗಳು ಮತ್ತು ಬೆಂಬಲಿಗರು ಹರಿಹಾಯ್ದಿದ್ದರು. ವಿಜಯೇಂದ್ರ ಈ ಸಂಬಂಧ ಹೇಳಿಕೆ ನೀಡಿ ಟೀಕೆಗಳನ್ನು ಖಂಡಿಸಿದ್ದರು. ಅದರ ಬೆನ್ನಲ್ಲೇ ಪರಿಷ್ಕೃತ ಆದೇಶ ಹೊರ ಬಿದ್ದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.