ಭಾನುವಾರ, ನವೆಂಬರ್ 28, 2021
19 °C

ಖತಲ್‌ ರಾತ್ರಿ ಮಾಡುವವರೇ ಕಾಂಗ್ರೆಸ್ಸಿಗರು: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಖತಲ್‌ ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು.

‘ಡಿಕೆಶಿ ವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ ಮೂಲಕ ಬಿಜೆಪಿ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಅಷ್ಟೆ ಸತ್ಯ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಲ್ಲಿ ಗೆಲುವು. ಅಷ್ಟೇ ಅಲ್ಲ ಮುಂಬರುವ 2023ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿಯೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು