ಬೆಂಗಳೂರು: ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕುವುದಿಲ್ಲ ಎಂಬ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು ‘ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರುವುದಿಲ್ಲ ಎಂದು ಕಾಣುತ್ತದೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ,‘ ಎಂದು ವ್ಯಂಗ್ಯವಾಡಿದ್ದಾರೆ.

‘ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ‘ಸಿದ್ದಕಲೆ’ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ,‘ ಎಂದು ಟೀಕಿಸಿದ್ದಾರೆ.

‘ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕುವುದಿಲ್ಲ ಎಂದು ‘ಸಿದ್ಧಹಸ್ತರು’ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ,’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.