ಮಂಗಳವಾರ, ಆಗಸ್ಟ್ 3, 2021
21 °C

ಸಿಎಂ ಕಚೇರಿಯಲ್ಲಿ ಅಹವಾಲು ಸ್ವೀಕಾರಕ್ಕೆ ಒಂದೇ ಇ-ಮೇಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ cm.kar@nic.in ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು cm.kar@nic.in ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು