ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ಕೋರ್ಸ್‌ಗಳ ಶುಲ್ಕ ಕಡಿತಕ್ಕೆ ಎಸ್‌ಐಓ ಆಗ್ರಹ

Last Updated 12 ಜುಲೈ 2021, 16:37 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್‌ ಕೋರ್ಸ್‌ಗಳೂ ಸೇರಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ವಾರ್ಷಿಕ ಶುಲ್ಕ, ಪರೀಕ್ಷಾ ಶುಲ್ಕಗಳಲ್ಲಿ ಶೇಕಡ 50ರಷ್ಟು ಕಡಿತಗೊಳಿಸುವಂತೆ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಷನ್‌ (ಎಸ್‌ಐಓ) ರಾಜ್ಯ ಘಟಕ ಸರ್ಕಾರವನ್ನು ಒತ್ತಾಯಿಸಿದೆ.

‘ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕ ಕಡಿತ ಮಾಡಬೇಕು. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನ ನೀಡಬೇಕು. ವಿದ್ಯಾರ್ಥಿಗಳ ಬಸ್‌ ಪಾಸ್‌ ದರವನ್ನು ಅರ್ಧದಷ್ಟು ಕಡಿಮೆ ಮಾಡಬೇಕು. ಕೋವಿಡ್‌ನಿಂದ ಅನಾಥರಾದ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಬೇಕು’ ಎಂದು ಎಸ್‌ಐಓ ರಾಜ್ಯ ಘಟಕದ ಕಾರ್ಯದರ್ಶಿ ಮಹಮ್ಮದ್ ಪೀರ್‌ ಲಟಗೇರಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯದೇ ಇರುವುದರಿಂದ ಸಿಇಟಿ ಪರೀಕ್ಷೆ ಆಧಾರದಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ನೀಡುವ ವಿಚಾರದಲ್ಲಿ ಇರುವ ಗೊಂದಲಗಳನ್ನು ನಿವಾರಿಸಬೇಕು. ಈ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟ ಚಿತ್ರಣ ನೀಡಬೇಕು. ಸಿಇಟಿ ಪರೀಕ್ಷೆಗೆ ಹೆಚ್ಚಿನ ಕೇಂದ್ರಗಳನ್ನು ತೆರೆಯಬೇಕು. ಪದವಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್‌ ತರಗತಿಗಳು ನಡೆದಿಲ್ಲ. ಈ ಕಾರಣದಿಂದ ಸೇತುಬಂಧ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT